Monday, June 29, 2026
ಸುದ್ದಿ

ನೋಯ್ಡಾದಲ್ಲಿ ಭಾರೀ ಅಗ್ನಿ ಅವಘಡ : ಹೊತ್ತಿ ಉರಿದ ಬೃಹತ್‌ ಕಟ್ಟಡ- ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ  ನೋಯ್ಡಾದ ಬೃಹತ್‌ ವಸತಿ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನೋಯ್ಡಾದ ಸೆಕ್ಟರ್ 119 ರಲ್ಲಿರುವ ಅರಣ್ಯ ಸೊಸೈಟಿಯಲ್ಲಿ ಈ ಅವಘಡ ಸಂಭವಿಸಿದೆ.

ಜಾಹೀರಾತು

ಕಟ್ಟಡದ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರಬಹದು ಎಂದು ಶಂಕಿಸಲಾಗಿದೆ. ಸುಮಾರು 6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಟ್ಟಡದಲ್ಲಿ ಜನ ಸಿಲುಕಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಅವಘಡಕ್ಕೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಪ್ರಾಥಮಿಕ ವರದಿಗಳ ಪ್ರಕಾರ, ಎಸಿ ಘಟಕದಲ್ಲಿ ಸಂಭವಿಸಿದ ಸ್ಫೋಟವೇ ಬೆಂಕಿಗೆ ಕಾರಣ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಅಗ್ನಿ ಅವಘಡದ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶದ ಅಲಿಗಂಜ್‌ನ ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 15 ಜನರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ಲಕ್ನೋ ಅಭಿವೃದ್ಧಿ ಪ್ರಾಧಿಕಾರ  ಕಟ್ಟಡ ತೆರವಿಗೆ ಆದೇಶ ಹೊರಡಿಸಿತ್ತು.