Monday, June 29, 2026
ಸುದ್ದಿ

ಲೇಡಿಗೋಷನ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಮಟ್ಟದ ಪೋಲಿಯೋ ಲಸಿಕೆ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲಾ ಮಟ್ಟದ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ಚಾಲನೆ ನೀಡಲಾಯಿತು. ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಾಹೀರಾತು

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ಎಂ.ಆರ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ರಾಜೇಶ್ ಬಿ.ವಿ., ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ದ.ಕ. ಜಿಲ್ಲೆಯಲ್ಲಿ 5 ವರ್ಷದೊಳಗಿನ 1,40,677 ಮಕ್ಕಳಿಗೆ ಪೋಲಿಯೊ ಹನಿ ಹಾಕಿಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಒಟ್ಟು 756 ಬೂತುಗಳನ್ನು ತೆರೆಯಲಾಗಿದೆ. ಈ ಪೈಕಿ 26 ಟ್ರಾನ್ಸಿಟ್ ತಂಡ, ಮಂಗಳೂರು ನಗರದಲ್ಲಿ ಮೂರು ಮೊಬೈಲ್ ತಂಡ ಕಾರ್ಯನಿರ್ವಹಿಸಿದೆ.  26 ಟ್ರಾನ್ಸಿಟ್ ತಂಡಗಳು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು ಸಹಿತ ದೇವಸ್ಥಾನಗಳಲ್ಲಿ ಪೋಲಿಯೋ ಲಸಿಕೆ ಹಾಕುವ ಕಾರ್ಯದಲ್ಲಿ ನಿರತವಾಗಿವೆ.

ಜಿಲ್ಲೆಯಲ್ಲಿ 506 ಮಂದಿ ವಲಸೆ ಮಕ್ಕಳಿದ್ದು, ಅವರಿಗೂ ಪೋಲಿಯೋ ಹನಿ ಹಾಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.