Monday, June 29, 2026
ಸುದ್ದಿ

ಅಸ್ಸಾಂನಲ್ಲಿ ಭೀಕರ ಪ್ರವಾಹ : 22,000ಕ್ಕೂ ಹೆಚ್ಚು ಜನರಿಗೆ ಸಂಕಷ್ಟ, ರೈಲು ಸಂಚಾರ ಸ್ಥಗಿತ- ಕಹಳೆ ನ್ಯೂಸ್

ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಸ್ಸಾಂನ ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ರೈಲು ಸಂಚಾರಕ್ಕೂ ತೊಂದೆರೆಯುಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ  ಪ್ರಕಾರ, ಧೇಮಾಜಿ, ನಲ್ಬಾರಿ, ದಿಬ್ರುಗಢ್, ಚಿರಂಗ್, ಲಖಿಂಪುರ್ ಮತ್ತು ಕೊಕ್ರಾಜಾರ್ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಸುಮಾರು 22,124 ಜನರು ಪ್ರವಾಹದಿಂದ ಪರದಾಡುವಂತಾಗಿದೆ. ಇದರಲ್ಲಿ ಧೇಮಾಜಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದ್ದು, ಸುಮಾರು 15,483 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು