Monday, June 29, 2026
ಸುದ್ದಿ

ಯುವ ವಾಹಿನಿ (ರಿ.) ಮಾಣಿ ಘಟಕ ವತಿಯಿಂದ ಯುವ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮ- ಕಹಳೆ ನ್ಯೂಸ್

ಮಾಣಿ: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸದಸ್ಯತ್ವ ಅರಿವು, ಹಾಗೂ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಜೂ.28  ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಜರಗಿತು.

ಜಾಹೀರಾತು

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಉತ್ತಮ ನಾಯಕರನ್ನು ರೂಪಿಸುವ ಅರ್ಥಪೂರ್ಣ ವೇದಿಕೆಗಳಾಗಿವೆ. ಯುವವಾಹಿನಿಯು ಸಮಾಜಮುಖಿ ಚಟುವಟಿಕೆಗಳ ಮೂಲಕ ಯುವಶಕ್ತಿಯನ್ನು ಒಗ್ಗೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ” ಎಂದರು.

ಯುವ ಸದಸ್ಯತ್ವ ಅರಿವು ಮತ್ತು ನಾಯಕತ್ವ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ರಾಜೇಶ್ ಸುವರ್ಣ ಬಂಟ್ವಾಳ ಹಾಗೂ ಯುವವಾಹಿನಿ ರಾಜ್ಯ ವ್ಯಕ್ತಿತ್ವ ವಿಕಸನ ನಿರ್ದೇಶಕ ಸತೀಶ್ ಮುರುವ ಅವರು ಪರಿಣಾಮಕಾರಿ ತರಬೇತಿ ನೀಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸೋಮಸುಂದರ ಸಾಲ್ಯಾನ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು.
ಘಟಕದ ಕೋಶಾಧಿಕಾರಿ ರಮೇಶ್ ತ್ರಿವೇಣಿ ಪ್ರಾಸ್ತಾವಿಕ ದೊಂದಿಗೆ ಸ್ವಾಗತಿಸಿದರು. ಮಾಜಿ ಕಾರ್ಯದರ್ಶಿ ಶಾಲಿನಿ ಜಗದೀಶ್ ಕುದುರೆಬೆಟ್ಟು ವಂದಿಸಿದರು. ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.