Tuesday, June 30, 2026
ಸುದ್ದಿ

ಉಪ್ಪಿನಂಗಡಿಯಲ್ಲಿ ಜು.04ರಂದು ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭ – ಕಹಳೆನ್ಯೂಸ್

ಉಪ್ಪಿನಂಗಡಿಯಲ್ಲಿ ಜು.04ರಂದು ವಿಟ್ಲ ಗ್ರಾಮೀಣ ಸಹಕಾರಿ ಸಂಘ ನಿಯಮಿತ ಸಂಘದ ನೂತನ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ಇರುವ ರಾಮ ಗೋಪಾಲ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಜಗನ್ನಾಥ ಸಾಲಿಯಾನ್ ಅವರು ವಹಿಸಲಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಶಾಖಾ ಕಛೇರಿಯನ್ನು ಉದ್ಘಾಟಿಸಲಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರಿನ ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಎನ್. ರಮೇಶ್ ಶಾಖೆಯ ಗಣಕೀಕರಣ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇನ್ನು ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೆ. ಅಬ್ದುಲ್ ರಹಿಮಾನ್, ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಹಾಗೂ ದ.ಕ ಜಿಲ್ಲಾ ಸಹಕಾರ ಭಾರತಿ ಇದರ ಉಪಾಧ್ಯಕ್ಷರಾದ ಕೆ.ವಿ ಪ್ರಸಾದ್, ಹಾಗೂ ಉಪ್ಪಿನಂಗಡಿಯ “ರಾಮ ಗೋಪಾಲ ಕಾಂಪ್ಲೆಕ್ಸ್” ಇದರ ಮಾಲಕರಾದ ಕೆ. ರಾಜೇಶ್ ನಾಯಕ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.