Wednesday, July 1, 2026
ದೆಹಲಿರಾಜ್ಯಸುದ್ದಿ

ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಸಾಧ್ಯತೆ -ಕಹಳೆ ನ್ಯೂಸ್

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವು  ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯುವ ಸಾಧ್ಯತೆ ಇದ್ದು, ಈ ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ಸುಮಾರು ನಾಲ್ಕು ವಾರಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಮಹತ್ವದ ಮಸೂದೆಗಳು ಕುರಿತು ಚರ್ಚೆ ನಡೆಯಲಿದೆ.
ಈ ಬಾರಿಯ ಅಧಿವೇಶನದಲ್ಲಿ ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ 33% ಮೀಸಲಾತಿ ಜಾರಿಗೊಳಿಸುವ ಸಂವಿಧಾನ ತಿದ್ದುಪಡಿ ಮಸೂದೆ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಪುನರ್‌ವಿಂಗಡನೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು

ಈ ಬಾರಿ ಅಧಿವೇಶನದಲ್ಲಿ ಟಿಎಂಸಿ ಮತ್ತು ಶಿವಸೇನೆಯಲ್ಲಿನ (ಯುಬಿಟಿ) ಬಂಡಾಯವು ಹೊರಹೊಮ್ಮುವ ಸಾಧ್ಯತೆ ಇದೆ. ಈಗಾಗಲೇ ಪ್ರತ್ಯೇಕ ಗುಂಪುಗಳಾಗಿ ಗುರುತಿಸಲು ಕೋರಿರುವ 20 ಟಿಎಂಸಿ ಮತ್ತು ಆರು ಶಿವಸೇನೆ (ಯುಬಿಟಿ) ಸಂಸದರ ಬೇಡಿಕೆಗಳ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಮತ್ತು ಮರು ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಯಲ್ಲಿ ಚುನಾವಣೆ ಬಳಿಕ ಆಡಳಿತಾರೂಢ ಎನ್‌ಡಿಎ ಪರವಾಗಿ ಬಲ ಹೆಚ್ಚಿದೆ.