Wednesday, July 1, 2026
ಸುದ್ದಿ

ಕಾವೂರು 18ನೇ ವಾರ್ಡ್‌ನಲ್ಲಿ 2.46 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಶಾಸಕ ಡಾ. ಭರತ್ ವೈ ಶೆಟ್ಟಿ -ಕಹಳೆ ನ್ಯೂಸ್

ಕಾವೂರು 18ನೇ ವಾರ್ಡ್‌ನ 4ನೇ ಮೈಲ್ ಎಸ್‌ಸಿ ಕಾಲೋನಿಯಲ್ಲಿ ಮಹಾತ್ಮ ಗಾಂಧಿ ಯೋಜನೆಯಡಿ ರೂಪಾಯಿ 2 ಕೋಟಿ 46 ಲಕ್ಷ ಅನುದಾನದಲ್ಲಿ ರಸ್ತೆ, ಚರಂಡಿ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.

ಜಾಹೀರಾತು

ಸ್ಥಳೀಯ ನಿವಾಸಿಗಳ ಹಾಗೂ ಸಾರ್ವಜನಿಕರ ಮನವಿಗಳನ್ನು ಆಲಿಸಿದ ಶಾಸಕರು ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ವ್ಯವಸ್ಥಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಗಾಲದ ಹಿನ್ನೆಲೆ ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮನಪ AE ಕೊಟ್ರೇಶ್, ಕಿರಿಯ ಅಭಿಯಂತರರಾದ ಮಿಥುನ್, ಮಾಜಿ ಮನಪ ಸದಸ್ಯೆ ಗಾಯತ್ರಿ ರಾವ್, ಜಿಲ್ಲಾ ಕಾರ್ಯಕಾರಿ ಸದಸ್ಯ ಸುಚೇತನ್ ಪೂಜಾರಿ, ಮಂಡಲ ಉಪಾಧ್ಯಕ್ಷ ಆನಂದ್ ಪಂಗಳ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ರಕ್ಷಿತ್ ಪೂಜಾರಿ, ಕಾವೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ-2 ಪ್ರಜ್ವಲ್ ಶೆಟ್ಟಿ, ವಾರ್ಡ್ ಅಧ್ಯಕ್ಷ ಕೊರಗಪ್ಪ ಶೆಟ್ಟಿ, ಕಾರ್ಯದರ್ಶಿ ಜಗದೀಶ್ ಅಂಚನ್, ಪ್ರಮುಖರಾದ ಅಶ್ವಿನ್, ಮಹೇಶ್ ಅಮೀನ್, ಬಾಲಕೃಷ್ಣ, ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.