
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದ ಸೇವೆಯನ್ನು ಶ್ಲಾಘಿಸಿ, ವೈದ್ಯರ ಸಮಾಜಮುಖಿ ಕೊಡುಗೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.











