Wednesday, July 1, 2026
ಸುದ್ದಿ

ಭಾರೀ ಮಳೆ ಹಿನ್ನೆಲೆ ಜು.2ರಂದು ದ.ಕ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಗೋಡೆ ಕುಸಿದು ಪ್ರಾಣ ಹಾನಿಯೂ ಸಂಭವಿಸಿದೆ.

ಜಾಹೀರಾತು

ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಮುಂಜಾಗ್ರತೆ ವಹಿಸಲು ತಿಳಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.