Friday, July 3, 2026
ಸುದ್ದಿ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ : ಕೊನೆಗೂ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ : ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ. ಈಗಾಗಲೇ ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಈ ಹೆಚ್ಚಳದಿಂದಾಗಿ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ಅನುಕೂಲವಾಗಲಿದೆ. ಇದರಿಂದ ಸರ್ಕಾರಕ್ಕೆ ತಿಂಗಳಿಗೆ ಹೆಚ್ಚುವರಿಯಾಗಿ 72.80 ಕೋಟಿ ರೂ. ವೆಚ್ಚವಾಗಲಿದೆ.

ರಾಮಲಿಂಗಾರೆಡ್ಡಿ ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆದೇಶಿಸಿದ್ರು. ಈ ತಿಂಗಳಿನಿಂದ ಸಾರಿಗೆ ನೌಕರರ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆಯಾಗಲಿದೆ.