Recent Posts

Thursday, July 2, 2026
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – ಕಹಳೆ ನ್ಯೂಸ್

ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ   ವೇದಿಕೆಯಾಗಲಿದೆ.
ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ

ಆರ್‌ಎಸ್‌ಎಸ್‌ನ ಶತಮಾನೋತ್ಸವದ  ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಸಂಘದ ಶಾಖೆಗಳ ವಿಸ್ತರಣೆ ಮತ್ತು ಮುಂಬರುವ ದಿನಗಳ ದೇಶವ್ಯಾಪಿ ಕಾರ್ಯಯೋಜನೆಗಳ ಕುರಿತು ಈ ಸಭೆಯಲ್ಲಿ ಗಂಭೀರ ಹಾಗೂ ಮಹತ್ವದ ಚರ್ಚೆಗಳು ನಡೆಯಲಿವೆ. 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಸಭೆಯ ನೇತೃತ್ವ ವಹಿಸಲು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್  ಅವರು ಜುಲೈ 6 ರಂದೇ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಇವರೊಂದಿಗೆ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ  ಸೇರಿದಂತೆ ಹಲವು ಪ್ರಮುಖ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಸರಸಂಘಚಾಲಕರ ಮುಂಚಿತ ಆಗಮನ ಹಾಗೂ ರಾಷ್ಟ್ರೀಯ ನಾಯಕರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಬೆಳಗಾವಿ ನಗರದಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅತ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ.