ಇಂದು( ಜು. 3)ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಪೂ ಕಾಲೇಜುಗಳಿಗೆ ರಜೆ- ಕಹಳೆ ನ್ಯೂಸ್

ಕರಾವಳಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜುಲೈ 3ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜು. 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ (ಪಿಯುಸಿ) ರಜೆ ಘೋಷಿಸಲಾಗಿದೆ. ಅಲ್ಲದೇ ಕೆರೆ, ನದಿ ತೀರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಮುನ್ನೆಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರಾವಳಿಯ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.










