Friday, July 3, 2026
ಸುದ್ದಿ

ಶಬರಿಮಲೆ ಅಯ್ಯಪ್ಪ ಸಮಾಜಂ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಕಾಯಕಾರಿಣಿ ಸಭೆ ಆಯೋಜನೆ-ಕಹಳೆ ನ್ಯೂಸ್

ಉಡುಪಿ : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (SASS) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾ ಸಮಿತಿಯ ಕಾಯಕಾರಿಣಿ ಸಭೆಯನ್ನು ಜುಲೈ 5ರಂದು ಭಾನುವಾರ ಸಂಜೆ 4 ಗಂಟೆಗೆ ಉಡುಪಿಯ ಅಂಬಲಾಡಿ ಬೈಪಾಸ್ ಸಮೀಪದ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ಆಯೋಜಿಸಲಾಗಿದೆ.

ಸಭೆಯಲ್ಲಿ ಉಡುಪಿ ತಾಲೂಕು ಸಮಿತಿಯ ಪದಗ್ರಹಣ ಹಾಗೂ ಕುಂದಾಪುರ ತಾಲೂಕು ಮಹಿಳಾ ಸಮಿತಿಯ ಪದಗ್ರಹಣ ಕಾರ್ಯಕ್ರಮಗಳು ನಡೆಯಲಿವೆ. SASS ಕೇಂದ್ರ ಸಮಿತಿ ಹಾಗೂ ರಾಜ್ಯ ಸಮಿತಿಯ ಪ್ರಮುಖರು ಈ ಸಭೆಗೆ ಆಗಮಿಸಲಿದ್ದು,ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಕಾರ್ಯಚಟುವಟಿಕೆಗಳ ಕುರಿತು ಚರ್ಚೆ ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾ SASS ನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು,ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾ ಸಾಸ್ಸ್ ನ ಅಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ಹಾಗೂ ಜಿಲ್ಲಾ ಮಹಿಳಾ ಅಧ್ಯಕ್ಷೆ ಶ್ರೀಮತಿ ತಾರಾ ಯು. ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.