Friday, July 3, 2026
ಕಾಪುಶಿಕ್ಷಣ

ಅಚ್ಚಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ LKG ತರಗತಿ ಉದ್ಘಾಟನೆ-ಕಹಳೆ ನ್ಯೂಸ್

ಕಟಪಾಡಿ :ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚ್ಚಡ ದಲ್ಲಿ ನೂತನವಾಗಿ ಆರಂಭಿಸಲಾದ LKG ತರಗತಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಬಂಗಾರದ ತುಂಡಿನಂತಿರುವ ಪುಟ್ಟ ಮಕ್ಕಳಿಗೆ ವಿದ್ಯೆ, ಬುದ್ಧಿ, ಸಂಸ್ಕಾರ ಹಾಗೂ ಆಟ-ಪಾಠಗಳ ಮೂಲಕ ಉತ್ತಮ ವ್ಯಕ್ತಿತ್ವವನ್ನು ರೂಪಿಸುವ ಪವಿತ್ರ ಕಾರ್ಯವನ್ನು ಶಾಲೆಗಳು ಮತ್ತು ಶಿಕ್ಷಕರು ಮಾಡುತ್ತಾರೆ. ಶಿಕ್ಷಕರು ಜವಾಬ್ದಾರಿಯಿಂದ ಸೇವೆ ಸಲ್ಲಿಸಿ ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡಬೇಕು. ಶಾಲೆಗಳು ದೇವಸ್ಥಾನಕ್ಕೆ ಸಮಾನವಾಗಿದ್ದು, ನಾನೂ ಇದೇ ರೀತಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಇಂದು ಈ ಸ್ಥಾನಕ್ಕೆ ಬಂದಿದ್ದೇನೆ” ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಬಾಲ್ಯದ ವಿದ್ಯಾಭ್ಯಾಸದ ದಿನಗಳನ್ನು ಸ್ಮರಿಸಿದ ಅವರು, “ಆಗ ಬಟ್ಟೆ, ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಇತ್ತು. ಆದರೆ ಇಂದು ಮಕ್ಕಳ ಶಿಕ್ಷಣಕ್ಕೆ ನೆರವಾಗಲು ಸಮಾಜದಲ್ಲಿ ಅನೇಕ ದಾನಿಗಳು ಮತ್ತು ಸಹೃದಯರು ಇದ್ದಾರೆ. ಶಾಲೆಗೆ ಯಾವುದೇ ಸಮಸ್ಯೆ ಎದುರಾದರೆ ನನ್ನ ಮನೆಗೆ ನೇರವಾಗಿ ಬನ್ನಿ. ಶಾಲೆಯ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುತ್ತೇನೆ. ಸಮಾಜದ ಋಣ ತೀರಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಮಾಜಿ ಕಟಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಅವರು ನೀಡಿ, ಸುಮಾರು ಒಂಬತ್ತು ದಶಕಗಳ ಇತಿಹಾಸ ಹೊಂದಿರುವ ಈ ಶಾಲೆಯನ್ನು ಉಳಿಸಿ-ಬೆಳೆಸುವುದು ಹಾಗೂ ಮುಂದಿನ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಶೆಟ್ಟಿ (ಬಡಗು ಮನೆ), ಅವಿನಾಶ್ ಆಚಾರ್ಯ, ಶುಭಾಷ್ ಬಲ್ಲಾಳ್ , ಪ್ರವೀಣ್ ಪೂಜಾರಿ, ಶಿವಣ್ಣ ಶೆಟ್ಟಿ, ಜಗದೀಶ ಆಚಾರ್ಯ, ಶ್ಯಾಮಲ ಮೇಡಂ ಹಾಗೂ ಶ್ರೀಮತಿ ಪೂರ್ಣಿಮಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ LKG ತರಗತಿಯ ಆರಂಭಕ್ಕೆ ಶುಭ ಹಾರೈಸಿದರು