ಬೆಂಗಳೂರು: ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಬಿ ಕೇರ್‌ನಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಕ್ಯಾಪ್‌ಜೆಮಿನಿ ಸಂಸ್ಥೆ ಸ್ಪಷ್ಟನೆ ನೀಡಿದೆ.
ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಸಂಸ್ಥೆ, ಪ್ರತಿಯೊಬ್ಬ ಮಗುವಿನ ಸುರಕ್ಷತೆ ಮತ್ತು ಯೋಗಕ್ಷೇಮವೇ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ. ಬೆಂಗಳೂರಿನ ಡೇಕೇರ್‌ನಲ್ಲಿ ನಡೆದಿರುವ ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ. ಡೇ ಕೇರ್ ಕೇಂದ್ರವನ್ನು ಕಾಂಟ್ರ್ಯಾಕ್ಟ್‌ಗೆ ನೀಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದು ತಿಳಿಸಿದೆ.
ತನಿಖೆ ಪೂರ್ಣಗೊಳ್ಳುವವರೆಗೂ ಡೇ ಕೇರ್ ಮುಚ್ಚಲಾಗುವುದು. ಸತ್ಯಾಂಶ ಹೊರತರಲು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ. ಡೇ ಕೇರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಿರುವ ಕಾರಣ, ಮಕ್ಕಳು ಇರುವ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್‌ಗೆ ಅವಕಾಶ ನೀಡಲಾಗಿದೆ. ಭಾರತದಾದ್ಯಂತ ನಮ್ಮ ಎಲ್ಲ ಕಚೇರಿಗಳಲ್ಲಿರುವ ಡೇ-ಕೇರ್ ಸೇವಾ ಪೂರೈಕೆದಾರರ ವ್ಯವಸ್ಥೆಯನ್ನು ಮರುಪರಿಶೀಲಿಸಲಾಗುತ್ತಿದೆ ಎಂದಿದೆ.