Sunday, July 5, 2026
ಸುದ್ದಿ

ಬೆಂಗಳೂರಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ : ಮಾರಕಾಸ್ತ್ರಗಳು ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ಪೊಲೀಸರು  ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮನೆಯೊಂದರಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಬೆಂಗಳೂರಿನ ಪೂರ್ವ ವಿಭಾಗದಲ್ಲಿ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಇಂದಿರಾನಗರದ ಪ್ರಭಾಕರ್ ಎಂಬಾತನ ಮನೆಯಲ್ಲಿ ಮಾರಾಕಾಸ್ತ್ರಗಳು ಕಂಡುಬಂದಿವೆ.

ಅಲ್ಲದೇ, ಅನುಮಾನಿತ ವ್ಯಕ್ತಿಗಳು ಮತ್ತು ಅವರಿಗೆ ಸೇರಿದ ವಾಹನಗಳ ತಪಾಸಣೆ ನಡೆಸಲಾಗಿದೆ. ಮೂವತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು