Saturday, July 4, 2026
ಚಿಕ್ಕಮಂಗಳೂರುಸುದ್ದಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ -ಕಹಳೆ ನ್ಯೂಸ್

ಚಿಕ್ಕಮಗಳೂರು: ಪಾಗಲ್‌ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ನೆಲಕ್ಕೆ ಹಾಕಿ ತುಳಿದು ಕ್ರೌರ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ.
ನಗರದ ಎಸ್‌ಪಿ ಹಾಗೂ ಡಿಸಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕಿಯ ಮೇಲೆ ಯುವಕ ಹಲ್ಲೆ ನಡೆಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಯುವಕ ಅಲ್ಲಿಂದ ಓಡಿ ಹೋಗಿದ್ದಾನೆ. ಆತನನ್ನು ಸ್ಥಳೀಯರು ಬೆನ್ನಟ್ಟಿ ಎಸ್‌ಪಿ ಮನೆ ಬಳಿ ಹಿಡಿದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿ ಅಕ್ಕ ಪಡೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿ ಹಾಸ್ಟೆಲ್‌ನಲ್ಲಿದ್ದುಕೊಂಡು ಓದುತ್ತಿದ್ದಳು ಎಂದು ತಿಳಿದುಬಂದಿದೆ. ಯುವಕ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಮೂಲದವನಾಗಿದ್ದಾನೆ. ಬಾಲಕಿ ಮನೆ ಹಾಗೂ ಹಾಸ್ಟೆಲ್ ಬಳಿ ಹೋಗಿ ಪ್ರೀತಿಸುವಂತೆ ಬಾಲಕಿಗೆ ಬೆದರಿಕೆ ಹಾಕಿದ್ದ. ಬಾಲಕಿಯ ಪೋಷಕರಿಗೂ ಫೋನ್ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು