Saturday, July 4, 2026
ಬೆಂಗಳೂರುರಾಜ್ಯಸುದ್ದಿ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಕೈದಿಗಳು ರಿಲೀಸ್ -ಕಹಳೆ ನ್ಯೂಸ್

ಬೆಂಗಳೂರು: ಸನ್ನಡತೆ ಆಧಾರದ ಮೇಲೆ ಪರಪ್ಪನ ಅಗ್ರಹಾರ  ಸೇರಿದಂತೆ ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ  24 ಕೈದಿಗಳನ್ನು  ಬಿಡುಗಡೆ ಮಾಡಲಾಗಿದೆ.
ಬಿಡುಗಡೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭಾಗಿಯಾಗಿದ್ದಾರೆ. ಕಾರಾಗೃಹ ಎಡಿಜಿಪಿ ಅಲೋಕ್ ಕುಮಾರ್, ಜೈಲ್ ಚೀಫ್ ಸೂಪರ್‌ಡೆಂಟ್ ಅಂಶು ಕುಮಾರ್ ಸೇರಿದಂತೆ ಕಾರಾಗೃಹ ಇಲಾಖಾ ಅಧಿಕಾರಿ ವರ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೆ ರಾಜ್ಯಪಾಲರು ಆದೇಶಿಸಿದ್ದಾರೆ. ಇದರಿಂದ ಜೀವಾವಧಿ ಸಜಾ ಬಂಧಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 24 ಕೈದಿಗಳು ಬಿಡುಗಡೆಗೊಂಡಿದ್ದಾರೆ. ಅಪರಾಧ ಕೃತ್ಯ ಎಸಗಿ ಜೈಲು ಸೇರಿದ್ದ ಕೈದಿಗಳು ಮನಪರಿವರ್ತನೆ ಆಗಿ ಒಳ್ಳೆಯ ಮನಷ್ಯರಾಗಿ ಬದಲಾದ ಹಿನ್ನೆಲೆ ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು