Sunday, July 5, 2026
ದೆಹಲಿರಾಜ್ಯಸುದ್ದಿ

ಮೊಮ್ಮಗನ ನೆನಪಲ್ಲಿ ತಾತ ನಿಧನ; ಕೇತನ್ ಅಗರ್ವಾಲ್ ಕುಟುಂಬಕ್ಕೆ ಮತ್ತೊಂದು ಆಘಾತ -ಕಹಳೆ ನ್ಯೂಸ್

ಪುಣೆ: ಭಾವಿ ಪತ್ನಿ ಸಿಯಾ ಗೋಯಲ್ ಕೈಯಲ್ಲಿ ಹತ್ಯೆಯಾದ ಉದ್ಯಮಿ ಕೇತನ್ ಅಗರ್ವಾಲ್ ಅವರ ಸಾವಿನ ಬೆನ್ನಲ್ಲೇ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮೊಮ್ಮಗನ ಸಾವಿನಿಂದ ತೀವ್ರ ಆಘಾತಕ್ಕೊಳಗಾಗಿ ಹಾಸಿಗೆ ಹಿಡಿದಿದ್ದ ಅವರ ತಾತ ದೇವಿದಯಾಳ್ ಅಗರ್ವಾಲ್ ಶನಿವಾರ ಸಂಜೆ ನಿಧನರಾಗಿದ್ದಾರೆ.
ಮೊಮ್ಮಗನ ಸಾವಿನಿಂದ ತೀವ್ರವಾಗಿ ನೊಂದಿದ್ದ 71 ವರ್ಷದ ದೇವಿದಯಾಳ್ ಅಗರ್ವಾಲ್ ಅವರು ಪುಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದರು. ಕೇತನ್ ಸಾವಿನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಮೊಮ್ಮಗನಿಗೆ ಆಗಿರುವ ಅನ್ಯಾಯದಿಂದ ಅವರು ತೀವ್ರವಾಗಿ ಮನನೊಂದಿದ್ದರು ಎಂದು ಕೇತನ್ ಕುಟುಂಬ ತಿಳಿಸಿತ್ತು. ಆದರೆ, ಶನಿವಾರ ರಾತ್ರಿ 9:45ಕ್ಕೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇತನ್ ಕೊಲೆ ಪ್ರಕರಣದ ಆರೋಪಿ ಸಿಯಾ ಗೋಯಲ್ ಅವರ ಕುಟುಂಬ, ದೇವಿದಯಾಳ್ ಅಗರ್ವಾಲ್ ಅವರು ಮೊದಲೇ ಹೊಟ್ಟೆಯ ಗೆಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧವೂ ಹೋರಾಡುತ್ತಿದ್ದರು ಎಂದು ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಕೇತನ್ ಅಗರ್ವಾಲ್ ಅವರ ತಂದೆ ವಿಶಾಲ್ ಅಗರ್ವಾಲ್ ತಮ್ಮ ಸೋಷಿಯಲ್ ಮೀಡಿಯಾ ಸ್ಟೇಟಸ್‌ನಲ್ಲಿ “Miss You Dad” ಎಂದು ಬರೆದು ತಂದೆಗೆ ಭಾವನಾತ್ಮಕವಾಗಿ ಗೌರವ ಸಲ್ಲಿಸಿದ್ದಾರೆ.

ದೇವಿದಯಾಳ್ ಅಗರ್ವಾಲ್ ಅವರು ಕೆಲವು ಸಮಯದ ಹಿಂದೆ ಪ್ರಮುಖ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ನಿರಂತರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ವರದಿಯಾಗಿದೆ.

ಈ ವಾರದ ಆರಂಭದಲ್ಲಿ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟ ಹಿನ್ನೆಲೆಯಲ್ಲಿ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಮತ್ತಷ್ಟು ಕ್ಷೀಣಿಸುತ್ತಿದ್ದಂತೆ ವೈದ್ಯರು ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.