ವಯನಾಡ್ ಭೂಕುಸಿತ ʻಮಾನವ ನಿರ್ಮಿತʼ : ಜೂ. 20 ರಂದೇ ಮಣ್ಣು ತೆರವುಗೊಳಿಸಲು ಸೂಚಿಸಲಾಗಿತ್ತು: ಸಿಎಂ ಸತೀಶನ್ -ಕಹಳೆ ನ್ಯೂಸ್

ವಯನಾಡ್: ಸುರಂಗ ರಸ್ತೆ ನಿರ್ಮಾಣ ಪ್ರದೇಶದಿಂದ ಮಣ್ಣು ತೆಗೆಯಲು ಜೂನ್ 20 ರಂದೇ ಗುತ್ತಿಗೆದಾರರಿಗೆ ಆದೇಶ ಹೊರಡಿಸಲಾಗಿತ್ತು. ಆದ್ರೆ ಅವರು ನಿಯಮ ಪಾಲಿಸದ ಕಾರಣ ಭೂಕುಸಿತ ಸಂಭವಿಸಿದೆ ಎಂದು ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹೇಳಿದ್ದಾರೆ.
ಮೆಪ್ಪಾಡಿ ಭೂಕುಸಿತ ದುರಂತದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸತೀಶನ್, ಮೀನಂಗಡಿಯ, ಕೋಝಿಕ್ಕೋಡ್‌ನ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿವೆ. ಸುರಂಗ ರಸ್ತೆಯ ಬಳಿ ಉಂಟಾದ ಭೂಕುಸಿತದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಒಬ್ಬರು ಸಾವನ್ನಪ್ಪಿದ್ದಾರೆ, 7 ಜನ ಕಾಣೆಯಾಗಿದ್ದಾರೆ. 7 ಮಂದಿಯನ್ನ ರಕ್ಷಣೆ ಮಾಡಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.








