Tuesday, July 7, 2026
ಸುದ್ದಿ

ಕಳೆದ ಎರಡು ದಿನಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ : ಜನ ಜೀವನ ಅಸ್ತವ್ಯಸ್ತ – ಕಹಳೆ ನ್ಯೂಸ್

ಪುತ್ತೂರು: ಕಳೆದ ಎರಡು ದಿನಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರ ದೈನಂದಿನ ಜೀವನ ಹಾಗೂ ವಿವಿಧ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ವ್ಯಾಪಾರಿಗಳು, ಬ್ಯಾಂಕ್‌ಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಸೇರಿದಂತೆ ಹಲವು ವಲಯಗಳು ಸಂಕಷ್ಟ .
ನಿರಂತರ ವಿದ್ಯುತ್‌ ವ್ಯತ್ಯಯದಿಂದ ಶೀತಲೀಕರಣ ವ್ಯವಸ್ಥೆಯನ್ನು ಅವಲಂಬಿಸಿರುವ ವ್ಯಾಪಾರಿಗಳಿಗೆ ಹೆಚ್ಚಿನ ಆರ್ಥಿಕ ನಷ್ಟ ಉಂಟಾಗಿದ್ದು, ಸಾರ್ವಜನಿಕರಿಗೂ ದೈನಂದಿನ ಚಟುವಟಿಕೆಗಳಲ್ಲಿ ತೊಂದರೆ ಎದುರಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಿರವಾಗದಿರುವ ಕಾರಣ ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇದೇ ವೇಳೆ, ವಿಟ್ಲ ಭಾಗದಲ್ಲಿಯೂ ಕಳೆದ ಶನಿವಾರದಿಂದ ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದಿರುವ ಬಗ್ಗೆ ವ್ಯಾಪಾರಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಕುರಿತು ಮೆಸ್ಕಾಂನ ವಿವಿಧ ಹಂತದ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಸಮರ್ಪಕ ಪ್ರತಿಕ್ರಿಯೆ ದೊರೆಯಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಸರ್ಕಾರದ ವಿದ್ಯುತ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಕಚೇರಿಗೂ ದೂರವಾಣಿ ಮೂಲಕ ಸಮಸ್ಯೆಯ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ವಿದ್ಯುತ್‌ ಪೂರೈಕೆಯನ್ನು ಶೀಘ್ರದಲ್ಲೇ ಸಹಜ ಸ್ಥಿತಿಗೆ ತರಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಾರ್ವಜನಿಕರಿಗೆ ವಿದ್ಯುತ್‌ ವ್ಯತ್ಯಯದ ನಿಖರ ಕಾರಣ ಮತ್ತು ಪುನಃಸ್ಥಾಪನೆಯ ಸಮಯದ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.