
ವಯನಾಡು: ಬೆಳಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ನಡೆಯುತ್ತಿದೆ.
ಮೆಪ್ಪಾಡಿ ಬಳಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಗುಡ್ಡ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ನಾಪತ್ತೆಯಾಗಿರುವ ಕಾರ್ಮಿಕರ ಶೋಧ ಕಾರ್ಯಕ್ಕೆ ಮಳೆ ತೀವ್ರ ಅಡ್ಡಿಪಡಿಸುತ್ತಿದೆ. ಮಣ್ಣು ಇಡಿಯಾಗಿ ಕುಸಿಯುತ್ತಿರುವುದರಿಂದ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದೆ.









