Saturday, July 11, 2026
ಸುದ್ದಿ

ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯೂ ಹೆಚ್ಚಾಗಿರಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜು. 11 ರಿಂದ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ ಸಾಧ್ಯತೆ ಇದೆ.ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.