
ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದು , ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮಣಿಪಾಲದ ಖಾಸಗಿ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್‌ನಲ್ಲಿದ್ದ ಏಳು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವಿದ್ಯಾರ್ಥಿಗೆ ತಲೆಗೆ ತೀವ್ರ ಪೆಟ್ಟಾಗಿದೆ.
ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ನಿಂತಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.









