
ಬೆಂಗಳೂರು: ವಿದ್ಯಾರ್ಥಿಗಳು ನೆಮ್ಮದಿಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾದ ಹಾಸ್ಟೆಲ್‌ನ ಕೆಳ ಮಹಡಿಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಬೆಳಕಿಗೆ ಬಂದಿದೆ.
ಕೆ.ಆರ್ ಪುರಂನ ಅವಲಹಳ್ಳಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದರೆ, ಮೇಲಿನ ಮಹಡಿಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ.
ಹಾಸ್ಟೆಲ್ ಕಳೆದ ಎರಡು ವರ್ಷಗಳಿಂದ ಇದೇ ಕಟ್ಟಡದಲ್ಲಿದೆ. ಮೂರು ತಿಂಗಳ ಹಿಂದೆ ನೆಲ ಮಹಡಿಯಲ್ಲಿ ಬಾರ್ ಆರಂಭವಾಗಿದೆ. ಅಂದಿನಿಂದ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ.









