ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಸ್ಥಾಪನಾ ದಿನವನ್ನು ಮತ್ತು ‘ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ‘ -ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಸ್ಥಾಪನಾ ದಿನವನ್ನು ಮತ್ತು ‘ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ‘ ಅನ್ನು ವಿವೇಕಾನಂದ ಫಾರ್ಮಸಿ ಕಾಲೇಜಿನಲ್ಲಿ ಆಚರಿಸಲಾಯಿತು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ 1949 ಜುಲೈ 9 ರಂದು ಸ್ಥಾಪನೆಗೊಂಡು ಇಂದಿಗೆ 78 ವರ್ಷಗಳನ್ನು ಪೂರೆಸಿರುತ್ತದೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ್ ಎಂ. ಪಿ. ಮಾತನಾಡಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾರತ ಮಾತೇ ಹಾಗು ವಿವೇಕಾನಂದರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆಚರಿಸಲಾಯಿತು ಈ ಸಂಧರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರು ಜಿಲ್ಲಾ ಸಂಚಾಲಕರಾದ ಚರಣ್ ರಾಜ್ ಇವರು ಉಪಸ್ಥಿತರಿದ್ದರು.









