ಸ್ಟಾಕ್ ಮಾರ್ಕೆಟ್‌ನಲ್ಲಿ ಲಾಸ್ : ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.
ಕವನ್ (24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆ ಬಳಿಕ ಕವನ್ ಮೃತದೇಹವನ್ನ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೇಲ್ನೋಟಕ್ಕೆ ಕವನ್ ಸ್ಟಾಕ್ ಮಾರ್ಕೇಟ್ ನಲ್ಲಿ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.









