Saturday, July 11, 2026
ಸುದ್ದಿ

ವಿಯೆಟ್ನಾಂನ ಫು ಕ್ವಾಕ್ ದ್ವೀಪದಲ್ಲಿ ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆ -ಕಹಳೆ ನ್ಯೂಸ್

ಹನೋಯ್: ವಿಯೆಟ್ನಾಂನ ಫು ಕ್ವಾಕ್‌ ದ್ವೀಪದ ಬಳಿಕ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.

ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ಬೃಹತ್‌ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಅಲ್ಲದೇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಹೇಳಿದೆ. ಅಲ್ಲದೇ ಕಂಟ್ರೋಲ್‌ ರೂಮ್‌ಗಳನ್ನ ಸ್ಥಾಪಿಸಿದ್ದು, ಸಹಾಯವಾಣಿ ಸಹ ಬಿಡುಗಡೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಲ ಗಂಟೆಗಳ ಹಿಂದೆ ವಿಯೆಟ್ನಾಂನ ಫು ಕ್ವಾಕ್‌ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿಖರ ಮಾಹಿತಿ ಖಚಿತಪಡಿಸಿಕೊಳ್ಳಲಾಗುತ್ತಿದೆ.

ಈ ಬೆನ್ನಲ್ಲೇ ಹೊ ಚಿ ಮಿನ್ಹ್ ನಗರದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ಕಂಟ್ರೋಲ್‌ ರೂಮ್‌ ಸ್ಥಾಪಿಸಿ, ಸಹಾಯವಾಣಿಯನ್ನೂ ಬಿಡುಗಡೆ ಮಾಡಲಾಗಿದೆ. ಸಂತ್ರಸ್ತ ಕುಟುಂಬಗಳು ಸಹಾಯಕ್ಕಾಗಿ ಸಂಪರ್ಕಿಸುವಂತೆ ಕೋರಿದೆ.