
ನವದೆಹಲಿ: ನೀಟ್-ಯುಜಿಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ 13 ಆರೋಪಿಗಳ ನ್ಯಾಯಾಂಗ ಬಂಧನವನ್ನು ಜು.24ರವರೆಗೆ ವಿಸ್ತರಿಸಿ ದೆಹಲಿಯ ರೌಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳ ನಾಯಾಂಗ ಬಂಧನ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಆರೋಪಿಗಳು ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು. ಈ ವೇಳೆ ಸಿಬಿಐ ಅಧಿಕಾರಿಗಳು, ವಿಚಾರಣೆ ಇನ್ನೂ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ.
ಸಿಬಿಐ ಮನವಿಯಂತೆ ಆರೋಪಿಗಳಾದ ಶಿವರಾಜ್, ತೇಜಸ್ ಶಾ, ದಿನೇಶ್, ವಿಕಾಸ್, ಮಂಗಿ ಲಾಲ್, ಯಶ್, ಪ್ರಹ್ಲಾದ್, ಡಾ.ಮನೋಜ್, ಧನಂಜಯ್, ಶುಭಂ, ಮನೀಷಾ, ಮನೀಶಾ ವಾಘ್ಮನಾರ್ ಸೇರಿ ಒಟ್ಟು 13 ಜನರ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿದೆ.









