Sunday, July 12, 2026
ಸುದ್ದಿ

ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ನಿಧನಕ್ಕೆ ಹಿರಿಯ ನಟಿ ಉಮಾಶ್ರೀ ಕಂಬನಿ- ಕಹಳೆ ನ್ಯೂಸ್

‎ಬೆಂಗಳೂರು: ದಕ್ಷಿಣ ಭಾರತದ ಹೆಮ್ಮೆಯ ಗಾನಕೋಗಿಲೆ, ಸ್ವರ ಸಾಮ್ರಾಜ್ಞಿ ಎಸ್. ಜಾನಕಿ  ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯೆ ಹಾಗೂ ಹಿರಿಯ ನಟಿ ಡಾ. ಉಮಾಶ್ರೀ ಅವರು ಕಂಬನಿ ಮಿಡಿದಿದ್ದಾರೆ.

‎ಜಾನಕಮ್ಮನವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಅಸಂಖ್ಯಾತ ಜನರ ಮನೆಮನಗಳಲ್ಲಿ ನೆಲೆಸಿದ್ದ ಅವರು ಸ್ವರ ಸಾಮ್ರಾಜ್ಞಿ ಎನಿಸಿಕೊಂಡಿದ್ದರು ಎಂದು ಹೇಳಿದ್ದಾರೆ. 

‎ಕನ್ನಡ ಸೇರಿದಂತೆ ಸಾವಿರಾರು ಸುಮಧುರ ಗೀತೆಗಳ ಮೂಲಕ ಭಾರತೀಯರ ನೆಚ್ಚಿನ ಗಾಯಕಿಯಾಗಿದ್ದ ಜಾನಕಮ್ಮ ಅವರ ಅಗಲಿಕೆ ಇಡೀ ಕಲಾ ಲೋಕಕ್ಕೆ ತುಂಬಲಾರದ ನಷ್ಟ ತಂದಿದೆ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು