Sunday, July 12, 2026
ಸುದ್ದಿ

ಹಿಂದೂ ಹೋರಾಟಗಾರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷಾದ್ ಬಂಧನ…!- ಕಹಳೆ ನ್ಯೂಸ್

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ಮುಂದಾಳು ಪ್ರವೀಣ್ ನೆಟ್ಟಾ‌ರ್ ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಬರ್ಬರವಾಗಿ ಕಡಿದು ಕೊಲೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ನೌಷಾದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಪ್ಪತ್ತಕ್ಕೂ ಅಧಿಕ ಮಂದಿಯನ್ನು ಎನ್.ಐ.ಎ.ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದಾರೆ. ಹತ್ಯೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ನೌಷಾದ್ ಪಡಂಗಡಿಯ ಪತ್ತೆಗೆ ಕಳೆದ ನಾಲ್ಕು ವರ್ಷಗಳಿಂದ ಶೋಧ ನಡೆಸಲಾಗುತ್ತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆತನ ಮನೆಗೆ ಹಲವು ಭಾರಿ ದಾಳಿ ನಡೆದಿತ್ತು. ಇದೀಗ ಆತನನ್ನು ಬಲೆಗೆ ಕೆಡವಲಾಗಿದೆ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎನ್‌.ಐ.ಎ. ವಿಶೇಷ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ