
ಮೈಸೂರು: ವಿಧಿವಶರಾಗಿರುವ ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು, ಇಂದು ಸಂಜೆ 5:30ರ ಒಳಗೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ.
ಜಾನಕಿಯಮ್ಮ ಅವರು ಬದುಕಿದ್ದಾಗ, ತಮ್ಮ ನಿಧನದ ನಂತರ ತಮ್ಮ ನೆಚ್ಚಿನ ತೋಟದಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು. ಅವರ ಕೊನೆಯ ಕೋರಿಕೆಯಂತೆ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಹಾಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಜೆಸಿಬಿ ಯಂತ್ರಗಳ ಮೂಲಕ ತೋಟದ ಜಾಗವನ್ನು ಸಮತಟ್ಟುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.









