Thursday, September 3, 2026
ಸುದ್ದಿ

ಮತದಾರರ ಪಟ್ಟಿ ಪರಿಷ್ಕರಣೆ ; ಬೆಂಗಳೂರಿನಲ್ಲಿ ಬಿಜೆಪಿ ಪ್ರಧಾನ ಕಛೇರಿಯಲ್ಲಿ ” ಎಸ್.ಐ.ಆರ್. ವಿಶೇಷ ಸಭೆ ” ಮುಖ್ಯ ಅತಿಥಿಯಾಗಿ ಅರುಣ್‌ ಶ್ಯಾಮ್ ಭಾಗಿ..!! – ಕಹಳೆ ನ್ಯೂಸ್

ಬೆಂಗಳೂರು : ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ಬೆಂಗಳೂರು ಕಾನೂನು ಪ್ರಕೋಷ್ಟ ವತಿಯಿಂದ ಇಂದು ಬೆಂಗಳೂರಿನ ಜಗನ್ನಾಥ ಭವನದಲ್ಲಿ ವಿಶೇಷ ಸಭೆ ನಡೆಯಿತು. ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಉದ್ಘಾಟಿಸಿದ್ರು. ಇನ್ನು ಮುಖ್ಯ ಅತಿಥಿಯಾಗಿ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಹಾಗೂ ಹಿರಿಯ ವಕೀಲರಾದ ಡಾ. ಅರುಣ್ ಶ್ಯಾಮ್ ಭಾಗಿಯಾಗಿದ್ದಾರೆ. ಪುತ್ತೂರಿನ ಬಿಜೆಪಿ ಅಭ್ಯರ್ಥಿ ಎಂದು ಬಿಂಬಿತರಾಗುತ್ತಿರುವ ಬೆನ್ನಲ್ಲೇ ಬಿಜೆಪಿ ಪ್ರಧಾನ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲೇ ಭಾಗಿಯಾಗಿರುವುದು‌ ಚರ್ಚೆಗೆ ಮತ್ತಷ್ಟು ಪುಷ್ಠಿ ನೀಡಿದೆ.


ಇನ್ನು ಕಾರ್ಯಕ್ರಮದಲ್ಲಿ ರಾಜ್ಯ ಪ್ರಕೋಷ್ಠದ ಸಂಯೋಜಕರು ಹಾಗೂ ಎಸ್.ಐ.ಆರ್. ನ ರಾಜ್ಯ ಸಂಚಾಲಕ ಎನ್. ದತ್ತಾತ್ರಿ, ಬಿಜೆಪಿ ಕಾನೂನು ಪ್ರಕೋಷ್ಟದ ಪದಾಧಿಕಾರಿಗಳು, ರಾಜ್ಯ ಹಾಗೂ ಜಿಲ್ಲಾ ಸಂಚಾಲಕರು, ಸಹ ಸಂಚಾಲಕರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ವೇಳೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಗತ್ಯ ದಾಖಲೆಗಳು ಹಾಗೂ ಕಾರ್ಯವಿಧಾನದ ಬಗ್ಗೆ ಮಾಹಿತಿ ನೀಡಲಾಯಿತು.