
ಬೆಂಗಳೂರು: ರಾಜ್ಯದಲ್ಲಿ 2026ರ ಮುಂಗಾರು ವೈಪರೀತ್ಯದಿಂದ ಒಂದೆಡೆ ಭಾರಿ ಮಳೆ-ಪ್ರವಾಹದಿಂದ ಅಪಾರ ಹಾನಿಯಾಗಿದ್ದರೆ, ಮತ್ತೊಂದೆಡೆ ಶೇ.40ರಿಂದ 43ರಷ್ಟು ಮಳೆ ಕೊರತೆಯಿಂದ ಬರಗಾಲದಛಾಯೆ ಆವರಿಸಿದೆ. ಈ ಹಿನ್ನೆಲೆ ನಾಳೆಯಿಂದ (ಜು.13) ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.











