ಗಂಡನ ಮನೆಯವರ ಸಾಲದ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್
ಬೆಳಗಾವಿ: ತಾಯಿ ಹಾಗೂ ಕರುಳ ಕುಡಿಯೊಂದು ಜೊತೆಯಾಗಿಯೇ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.
ಗಂಡನ ಮನೆಯವರ ತೀವ್ರ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ತಾಯಿ, ತನ್ನ ಮೂರು ವರ್ಷದ ಮಗನೊಂದಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.
ಪ್ರೇಮಾ ನಾಗೇಶ ತಳವಾರ (28) ಹಾಗೂ ಅವರ 3 ವರ್ಷದ ಪುತ್ರ ಭುವನ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇವರು ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿಗಳಾಗಿದ್ದಾರೆ.










