Tuesday, July 14, 2026
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ಮಹಿಳೆಯರಿಂದ ಜಗದ್ಗುರು ಶ್ರೀ ಶಂಕರಾಚಾರ್ಯರರ ನಿಂದನೆ – ಕಹಳೆ ನ್ಯೂಸ್

ಉಡುಪಿ : ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಏಕಾದಶಿಯ ಪುಣ್ಯದಿನ ನಡೆದ ಕಾರ್ಯಕ್ರಮ ಒಂದರಲ್ಲಿ ಜಗದ್ಗುರು ಶಂಕರಾಚಾರ್ಯರರನ್ನು ನಿಂದನೆ ಮಾಡಿರುವ ಘಟನೆ ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಏಕಾದಶಿಯಂದು ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಇಬ್ಬರು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಜಗದ್ಗುರು ಶಂಕರಾಚಾರ್ಯರರ ಕುರಿತು ನಿಂದನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆಯನ್ನು ಶಂಕರಾಚಾರ್ಯರರ ಸಿದ್ಧಾಂತವನ್ನು ಪ್ರತಿಪಾದಿಸುವವರು ಹಾಗೂ ಹಿಂದೂ ಪರ ಹೋರಾಟಗಾರರು ಖಂಡಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಹಾಗೂ ಕ್ಷಮೆಯಾಚನೆಗೆ ಆಗ್ರಹಿಸದ್ದು, ಉಡುಪಿ ಮಠದಿಂದ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದ್ದಾರೆ.