
ನೆಲಮಂಗಲ: ಪ್ರೀತಿಸಿ ಮದುವೆಯಾಗಿ ನವವಿವಾಹಿತೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಬಸವನಹಳ್ಳಿಯಲ್ಲಿ ನಡೆದಿದೆ.
ಗೌರಿಬಿದನೂರಿನ ಬೀರಮ್ಮನಹಳ್ಳಿ ಮೂಲದ ತನುಜಾ (31) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯಲಹಂಕದ ಮಾಯಸಂದ್ರ ನಿವಾಸಿಯಾದ ರವೀಂದ್ರ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು ಎನ್ನಲಾಗಿದೆ.
ರವೀಂದ್ರ ಹಾಗೂ ತನುಜಾ ಇಬ್ಬರೂ ಕೆಲಸಕ್ಕೆ ಹೋಗುವಾಗ ಪರಿಚಯವಾಗಿದ್ದರು. ದಿನಗಳೆದಂತೆ ಈ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರೂ ಪರಸ್ಪರ ಇಷ್ಟಪಟ್ಟು ಇತ್ತೀಚೆಗಷ್ಟೇ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ, ಸ್ವಲ್ಪ ಸಮಯ ಕಳೆಯಲಿ, ಆಮೇಲೆ ನಮ್ಮ ಮನೆಯಲ್ಲಿ ವಿಷಯ ತಿಳಿಸುತ್ತೇನೆ ಎಂದು ಹೇಳಿದ್ದ ರವೀಂದ್ರ, ತನುಜಾಳನ್ನು ಯಲಹಂಕದ ಸಿಂಗಾಪುರದ ಬಾಡಿಗೆ ಮನೆಯೊಂದರಲ್ಲಿ ಇರಿಸಿದ್ದ.










