Wednesday, July 15, 2026
ಜಿಲ್ಲೆಸುದ್ದಿ

ಪ್ರಿಯಾಂಕ್ ಖರ್ಗೆ ತವರಲ್ಲೇ 3 ಸಜಾ ಕೈದಿಗಳು ಜೈಲಿನಿಂದ ಪರಾರಿ ‌-ಕಹಳೆ ನ್ಯೂಸ್

ಕಲಬುರಗಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲಿರುವ ಕೇಂದ್ರ ಕಾರಾಗೃಹದಿಂದ  ಮೂವರು ಸಜಾ ಕೈದಿಗಳು ಪರಾರಿಯಾಗಿದ್ದಾರೆ.

ಮಸ್ತಾನ್,ಸಂತೋಷ್ ಹಾಗೂ ಸಾಗರ್ ಪರಾರಿಯಾದ ಕೈದಿಗಳು. ಬೀದರ್‌ನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈ ಮೂವರು ಶಿಕ್ಷೆಗೆ ಒಳಪಟ್ಟಿದ್ದರು. ಮಧ್ಯರಾತ್ರಿ 3 ಗಂಟೆಗೆ ಜೈಲಿನ ಕಂಪೌಡ್ ಹಾರಿ ಈ ಮೂವರು ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೈದಿಗಳು ಪರಾರಿಯಾಗಲು ಜೈಲು ಸಿಬ್ಬಂದಿಯೇ ಸಹಕಾರ ನೀಡಿದ್ದಾರೆ ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಮಧ್ಯರಾತ್ರಿ ಲಾಕಪ್‌ನಲ್ಲಿ ಇರಬೇಕಾದ ಕೈದಿಗಳನ್ನು ಜೈಲು ಸಿಬ್ಬಂದಿ ಯಾಕೆ ಹೊರಗೆ ಬಿಟ್ಟರು ಎಂಬ ಪ್ರಶ್ನೆ ಮೂಡಿದೆ. ಈ ಮೂಲಕ ಕೈದಿಗಳ ಪರಾರಿಗೆ ಜೈಲಿನ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.