ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್

ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಶೋಕ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ದೀಪ ಬೆಳಗಿಸಿ ಉದ್ಘಾಟಿಸಿದರು.
ತಾಲೂಕು ಕೃಷಿ ಮೇಲ್ವಿಚಾರಕರಾದ ದೇವೇಂದ್ರ ರವರು ಪರಿಸರ ರಕ್ಷಣೆಯೊಂದಿಗೆ ಗಿಡ ಮರ ಗಳನ್ನೂ ಬೆಳೆಸಿ ನಾಡು ಉಳಿಸಿ ಮುಂದಿನ ಪೀಳಿಗೆ ವರ್ಗಾಯಿಸಿ ಪರಿಸರದಲ್ಲಿರುವ ಎಲ್ಲಾ ಜೀವ ಸಂಕುಲಗಳು ಉಳಿಯಬೇಕಾದರೆ ಪರಿಸರ ಜಾಗೃತಿ ಮೂಲಕ ಸಂರಕ್ಷಣೆ ನಾವೆಲ್ಲರೂ ಸೇರಿ ಮಾಡಬೇಕಾಗಿದೆ.
ಮಕ್ಕಳು ತಮ್ಮ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ತಮ್ಮ ಹುಟ್ಟು ಆಚರಿಸಿ ಎಂದರು.ಮಕ್ಕಳಿಗೆ ಸ್ಥಳೀಯ ಔಷಧೀಯ ಗಿಡಗಳು ಹಾಗೂ ಇತರೆ ಹಣ್ಣಿನ ಗಿಡಗಳ ಎಲೆ ಗುರುತಿಸುವಿಕೆಯನ್ನು ಮಾಡಿ ಗುಣಲಕ್ಷಣಗಳನ್ನು ತಿಳಿಸಿದರು.
ವಲಯ ಮೇಲ್ವಿಚಾರಕರಾದ ಶ್ರೀಮತಿ ಸರಿತಾ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಬೇಬಿ, , ಸೇವಾ ಪ್ರತಿನಿಧಿ ಶ್ರೀಮತಿ ಆಪ್ಸ, ಶಿಕ್ಷಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಮೇಡಂ ನಿರೂಪಿಸಿದರು.










