Wednesday, July 15, 2026
ಜಿಲ್ಲೆಶಿವಮೊಗ್ಗಸುದ್ದಿ

ಪಾರಂಪರಿಕ ಭತ್ತದ ತಳಿಗಳ ಸಂರಕ್ಷಣೆಗೆ ಕೊಳವಂಕ ಗ್ರಾಮದಲ್ಲಿ ಪಾದಯಾತ್ರೆ – ಕಹಳೆ ನ್ಯೂಸ್

ಶಿವಮೊಗ್ಗ  : ಸಾವಯವ ಕೃಷಿ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಪಾರಂಪರಿಕ ಭತ್ತದ ತಳಿಗಳ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ, ಶ್ರೀ ಸೋದೆ ವಾದಿರಾಜ ಮಠದ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಹೊಸನಗರ ತಾಲೂಕಿನ ಕೊಳವಂಕ ಗ್ರಾಮದಲ್ಲಿ ಪಾದಯಾತ್ರೆ ನಡೆಸಿದರು.

    

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಾದಿಗಲ್ಲು ಅಭಯ ಲಕ್ಷ್ಮೀ ನರಸಿಂಹ ದೇವಸ್ಥಾನ ಹಾಗು ತೀರ್ಥಹಳ್ಳಿಯ ಕೃಷಿ ಪ್ರಯೋಗ ಪರಿವಾರದ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ರೈತರು ಹಾಗೂ ಕೃಷಿ ಆಸಕ್ತರು ಭಾಗವಹಿಸಿದರು. ಹಾದಿಗಲ್ಲು ಲಕ್ಷ್ಮೀನಾರಾಯಣ , ಕೃಷಿ ಪ್ರಯೋಗ ಪರಿವಾರದ ಪ್ರಮುಖರಾದ ಶ್ರೀವತ್ಸ , ದಿನೇಶ್ ಸರು , ಅರುಣ , ಆ ಶ್ರೀ ಆನಂದ ಅವರು ಉಪಸ್ಥಿತರಿದ್ದರು.

ಪಾದಯಾತ್ರೆಯ ಮೂಲಕ ಸಾವಯವ ಕೃಷಿಯ ಮಹತ್ವ ಹಾಗೂ ಪಾರಂಪರಿಕ ಭತ್ತದ ತಳಿಗಳನ್ನು ಸಂರಕ್ಷಿಸುವ ಅಗತ್ಯತೆಯ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ , ಎಲ್ಲಾ ರೈತರು ಸೋದೆ ಪರ್ಯಾಯ ಸಂದರ್ಭದಲ್ಲಿ ಉಡುಪಿಗೆ ಆಗಮಿಸಿ ಕೃಷ್ಣ ಮುಖ್ಯಪ್ರಾಣದೇವರ ಅನುಗ್ರಹ ಪ್ರಸಾದ ಸ್ವೀಕರಿಸಲು ಸೋದೆ ಶ್ರೀಗಳು ಆಹ್ವಾನಿಸಿದರು.