ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಯ ಬಂಧನ -ಕಹಳೆ ನ್ಯೂಸ್

ಮಂಗಳೂರು : ಬುರ್ಖಾ ಧರಿಸಿಕೊಂಡು ಪೊಲೀಸರ ಕಣ್ತಪ್ಪಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ರೌಡಿ ಯನ್ನು ಉಳ್ಳಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಇಮ್ರಾನ್ ಸುರ್ಮೋ ಎಂದು ಗುರುತಿಸಲಾಗಿದೆ.
ಈತ ನಗರ ಮತ್ತು ಉಡುಪಿ ಜಿಲ್ಲೆಯ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್‌ಗಳಿದ್ದರೂ ಹಾಜರಾಗದೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಬುರ್ಖಾ ಹಾಕಿಕೊಂಡು ತಲೆಮರೆಸಿಕೊಂಡು ಓಡಾಡುತ್ತಿದ್ದನು.
ಈತನ ವಿರುದ್ದ ಮಂಗಳೂರು ನಗರದ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.










