ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ – ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ಪರಿಶೀಲನೆ -ಕಹಳೆ ನ್ಯೂಸ್

ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ವೀರಮಾರುತಿ ರಸ್ತೆ ಬಳಿ ಕಡಲ್ಕೊರೆತ ಉಂಟಾಗಿದ್ದು ಈ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿರುವ ಸಲುವಾಗಿ ಇಂದು ದಿನಾಂಕ 14-07-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಜಮಾಡಿ – ನಡಿಪಟ್ನ ಸೇರಿದಂತೆ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದ್ದು ತಕ್ಷಣ ತುರ್ತು ಕಾಮಗಾರಿ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶರಣ್ ಕುಮಾರ್ ಮಟ್ಟು, ಸುಧಾಕರ್ ಕರ್ಕೇರ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯ ಅಭಿಯಂತರಾದ ಪ್ರಶಾಂತ್, ಸ್ಥಳೀಯರಾದ ಕೃಷ್ಣ ಗುರಿಕಾರ, ಯತೀಶ್ ಮೆಂಡನ್, ರಕ್ಷಿತ್ ಸಾಲ್ಯಾನ್ ಉಪಸ್ಥಿತರಿದ್ದರು.










