
ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.
ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.
ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ:
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ವರದಿಯಾಗಿದೆ. ಜೂನ್ ತಿಂಗಳ ಅವಧಿಯಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈ ತಿಂಗಳ ಕಳೆದ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಈ 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.










