Thursday, July 16, 2026
ಸುದ್ದಿ

ಜು.23ರಂದು ‘ಜನನಾಯಗನ್’ ವಿಶ್ವದಾದ್ಯಂತ ಭರ್ಜರಿ ಬಿಡುಗಡೆ- ಕಹಳೆ ನ್ಯೂಸ್

ಮಿಳು ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನನಾಯಗನ್’ ಜುಲೈ 23ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಸಿನಿಮಾ ರಿಲೀಸ್ ಕುರಿತು ಕೆವಿಎನ್ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಅಧಿಕೃತವಾಗಿ ಘೋಷಿಸಿದೆ.

‘ಜನನಾಯಗನ್’ ಚಿತ್ರವನ್ನು ಖ್ಯಾತ ನಿರ್ದೇಶಕ ಹೆಚ್.ವಿನೋತ್ ನಿರ್ದೇಶಿಸಿದ್ದು, ಆ್ಯಕ್ಷನ್, ಭಾವನಾತ್ಮಕ ಕಥಾಹಂದರ ಹಾಗೂ ಸಾಮಾಜಿಕ ಸಂದೇಶದೊಂದಿಗೆ ಸಿನಿಮಾ ಮೂಡಿಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಪೋಸ್ಟರ್, ಟೀಸರ್ ಮತ್ತು ಹಾಡುಗಳು ಸಿನಿಪ್ರಿಯರ ಗಮನ ಸೆಳೆದಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜಕೀಯ ಪ್ರವೇಶದ ಬಳಿಕ ವಿಜಯ್ ಅವರ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ‘ಜನನಾಯಗನ್’ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿದೆ. ಚಿತ್ರದಲ್ಲಿ ವಿಜಯ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದು, ಬಾಲಿವುಡ್ ನಟ ಬಾಬಿ ಡಿಯೋಲ್ ಪ್ರಮುಖ ಪ್ರತಿನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಮಮಿತಾ ಬೈಜು ಸೇರಿದಂತೆ ಹಲವು ಖ್ಯಾತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ‘ಜನನಾಯಗನ್’ ಬಿಡುಗಡೆಗೆ ದಳಪತಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಸಿನಿಮಾ ಬಿಡುಗಡೆಗೂ ಮುನ್ನ ಸಿಎಂ ವಿಜಯ್ ಥಿಯೇಟರ್‌ಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಚಿತ್ರದ ಮೇಲೆ ಭಾರೀ ನಿರೀಕ್ಷೆ ಇರುವುದರಿಂದ ಬಿಡುಗಡೆಯ ವೇಳೆ ಟಿಕೆಟ್ ದರ ಹೆಚ್ಚಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಯಾದಾಗ, ವಿಶೇಷವಾಗಿ ಮಲ್ಟಿಪ್ಲೆಕ್ಸ್ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದು ಟಿಕೆಟ್ ಮಾರಾಟ ಮಾಡುವುದು ಸಾಮಾನ್ಯ. ಇದೇ ಕಾರಣಕ್ಕೆ ವಿಜಯ್ ತಂಡ ಈಗಾಗಲೇ ಥಿಯೇಟರ್ ಮಾಲೀಕರಿಗೆ ಟಿಕೆಟ್ ದರ ಹೆಚ್ಚಿಸಬಾರದು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಇದರ ಜೊತೆಗೆ ಬ್ಲ್ಯಾಕ್ ಟಿಕೆಟ್ ಮಾರಾಟ, ಬೆನಿಫಿಟ್ ಶೋಗಳಂತಹ ಕಾನೂನುಬಾಹಿರ ಚಟುವಟಿಕೆಗಳನ್ನು ‘ಜನನಾಯಗನ್’ ಚಿತ್ರದ ಪ್ರದರ್ಶನದ ವೇಳೆ ನಡೆಸದಂತೆ ಥಿಯೇಟರ್‌ಗಳು ಹಾಗೂ ಚಿತ್ರ ನಿರ್ಮಾಣ ಸಂಸ್ಥೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಬಿಡುಗಡೆಯ ಬಳಿಕ ‘ಜನನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ಯಾವ ರೀತಿಯ ದಾಖಲೆ ನಿರ್ಮಿಸಲಿದೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ ಮೂಡಿದ್ದು, ವರ್ಷದ ಅತಿದೊಡ್ಡ ಬಿಡುಗಡೆಯಾಗಿ ಈ ಸಿನಿಮಾ ಹೊರಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ.