Saturday, July 18, 2026
ಸುದ್ದಿ

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ : ಇನ್‌ಫ್ಲೂಯೆನ್ಸರ್ ಅಮುಕು ಡುಮುಕು ವಿರುದ್ಧ FIR- ಕಹಳೆ ನ್ಯೂಸ್

ಬೆಂಗಳೂರು: ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿರುವ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮೇಲೆ ಎಫ್‌ಐಆರ್ ದಾಖಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೆಸ್ಟೋ ಬಾರ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಹಾಗೂ ಬಿಲ್ ನೀಡಲು ನಿರಾಕರಿಸಿದ ನಂತರ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜು.9ರ ರಾತ್ರಿ ರೆಸ್ಟೋ ಬಾರ್‌ಗೆ ಹೋಗಿದ್ದ ಮಂಜು ಅಲಿಯಾಸ್ ಅಮುಕು ಡುಮಕು ಊಟ ಮತ್ತು ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಬಿಲ್ ಕೇಳಿದ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ ಹೊರಗೆ ಹೋಗ್ತಿದ್ದಾಗ ತಡೆದು ಪ್ರಶ್ನೆ ಮಾಡಿದ್ದ ಮಹಿಳಾ ಸಿಬ್ಬಂದಿಗೆ ಸೆಲ್ಫಿ ಪೋಟೋ ಕೊಡುವಂತೆ ಕೇಳಿದ್ದಾರೆ. ಇದೇ ವೇಳೆ ಸ್ಥಳದಲ್ಲಿದ್ದ ಪಬ್ ಮ್ಯಾನೇಜರ್‌ ಮೇಲೆ ಹಲ್ಲೆಗೆ ಯತ್ನಿಸಿದ್ದು, ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ.

ಸದ್ಯ ಅಮುಕು ಡುಮುಕು ಹಾಗೂ ಮತ್ತವರ ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಗಳಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ