
ಕೋಲ್ಕತ್ತಾ: ನಟಿಯೂ ಆಗಿರುವ ಟಿಎಂಸಿ ಸಂಸದೆ ಕೋಯಲ್ ಮಲಿಕ್ ಅವರು ಇಂದು (ಜು.16) ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದು ಬಂಡಾಯದ ಬಿಸಿ ಎದುರಿಸುತ್ತಿರುವ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಂತಾಗಿದೆ.
ರಾಜ್ಯಪಾಲರಿಗೆ ಸಲ್ಲಿಸಿದ ಪತ್ರದಲ್ಲಿ ಕೋಯಲ್ ಮಲಿಕ್, ʻನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದನ್ನು ದಯವಿಟ್ಟು ತಕ್ಷಣ ಜಾರಿಗೆ ತರಬೇಕು. ರಾಜ್ಯಸಭಾ ಸದಸ್ಯಳಾಗಿ ನನ್ನ ಅಧಿಕಾರಾವಧಿಯಲ್ಲಿ ಎಲ್ಲಾ ಸಹಾಯ ಮತ್ತು ಸಹಕಾರ ನೀಡಿದ್ದಕ್ಕಾಗಿ ನಾನು ನಿಮ್ಮ ಘನತೆವೆತ್ತ, ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಕಾರ್ಯದರ್ಶಿಯ ಎಲ್ಲಾ ಕಾರ್ಯಕಾರಿಣಿಗಳಿಗೆ ನನ್ನ ಕೃತಜ್ಞತೆ ಅರ್ಪಿಸುತ್ತೇನೆʼ ಎಂದು ಬರೆದಿದ್ದಾರೆ.











