Sunday, September 6, 2026
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.18 (ನಾಳೆ)ರಂದು ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ -ಕಹಳೆ ನ್ಯೂಸ್

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜಾಹೀರಾತು

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜುಲೈ 18, ಶನಿವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ–2005ರ ಕಲಂ 51(ಬಿ) ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಪಾಲಕರು ಮಕ್ಕಳನ್ನು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆ, ನದಿತೀರ ಹಾಗೂ ಸಮುದ್ರತೀರಗಳಿಗೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಹಾಗೂ ಪ್ರವಾಸಿಗರು ಮತ್ತು ಸಾರ್ವಜನಿಕರು ನದಿತೀರ ಹಾಗೂ ಸಮುದ್ರತೀರಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಯಾವುದೇ ತುರ್ತು ನೆರವಿಗಾಗಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯ 1077 ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಬಹುದು.