
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.











