Wednesday, July 22, 2026
ಸುದ್ದಿ

ಜುಲೈ 21ರಂದು ಕುಂದಾಪುರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 21ರಂದು (ಮಂಗಳವಾರ) ಬೆಳಿಗ್ಗೆ 10 ಗಂಟೆಗೆ ನಗರದ ಭಂಡಾರ್ಕಾರ್ಸ್ ಕಾಲೇಜಿನ ರಾಧಾಬಾಯಿ ಹಾಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಜಯ ಕರ್ನಾಟಕ ಮಂಗಳೂರು ವಿಭಾಗದ ಹಿರಿಯ ವರದಿಗಾರ ಮುಹಮ್ಮದ್ ಆರಿಫ್ ಅವರು ಪತ್ರಿಕಾ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪತ್ರಿಕಾ ದಿನಾಚರಣೆಯ ಅಂಗವಾಗಿ ಕೆಯುಡಬ್ಲ್ಯುಜೆ 2024ನೇ ಸಾಲಿನ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರಶಾಂತ ಪಾದೆ ಅವರಿಗೆ ಪತ್ರಿಕೋದ್ಯಮ ದಿನದ ಗೌರವಾರ್ಪಣೆ ಸಲ್ಲಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಕುಂದಾಪುರ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ಕುಮಾರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್. ಶೆಣೈ, ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸರೋಜಾ ಎಂ., ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಾಜೇಶ್ ಕೆ.ಸಿ. ಹಾಗೂ ಜಿಲ್ಲಾ ಕಾರ್ಯದರ್ಶಿ ಟಿ. ಲೋಕೇಶ್ ಆಚಾರ್ಯ ತೆಕ್ಕಟ್ಟೆ ಉಪಸ್ಥಿತರಿರಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್. ಬೀಜಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.