ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ಯಶ್ ಫಿದಾ : ಶೂರ್ಪನಖಿ ಪಾತ್ರಕ್ಕೆ ಮೆಚ್ಚುಗೆ – ಕಹಳೆ ನ್ಯೂಸ್

ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮತ್ತೊಂದು ಪಾತ್ರ ಈಗ ಸಿನಿಪ್ರಿಯರ ಕುತೂಹಲ ಹೆಚ್ಚಿಸಿದೆ. ಶೂರ್ಪನಖಿ ಪಾತ್ರದಲ್ಲಿ ನಟಿಸಿರುವ ರಕುಲ್ ಪ್ರೀತ್ ಸಿಂಗ್ ಅಭಿನಯಕ್ಕೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾದಲ್ಲಿ ಶೂರ್ಪನಖಿ ಪಾತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾ ಬಿಡುಗಡೆಯಾಗುವ ಮುನ್ನವೇ ಅವರ ಪಾತ್ರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ರಾವಣನ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ಯಶ್ ಕೂಡ ರಕುಲ್ ಅಭಿನಯವನ್ನು ಬಹಿರಂಗವಾಗಿ ಹೊಗಳಿದ್ದಾರೆ.











